Header Banner

28 ಜೂನ್ : ಮಂಗಳೂರು ಬೈಕಂಪಾಡಿ ಸುತ್ತುಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯಥೆಯ

Banner

ಜೂನ್ 28ರಂದು ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Advertisement

ಮಂಗಳೂರು, ಜೂನ್ 26: ಕೆಪಿಟಿಸಿಎಲ್ ವತಿಯಿಂದ ಬೈಕಂಪಾಡಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28ರಂದು ಕೆಲ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೈಕಂಪಾಡಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆವಿ ಬ್ಲೂ ವಾಟರ್, ಮಲಬಾರ್ ಆಕ್ಸಿಜನ್, ಎಪಿಜೆ ಪ್ಲೈವುಡ್, ನೆಸ್ ವ್ಯಾಕ್ಯೂಮ್ ಬೋರ್ಡ್ ಹಾಗೂ ಸಂಬಂಧಿತ ಫೀಡರ್‌ಗಳಿಗೆ ಒಳಪಡುವ ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯುತ್ ಪೂರೈಕೆಯನ್ನು ಪುನರಾರಂಭಿಸಲಾಗುವುದು. ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ ಮನವಿ ಮಾಡಿದೆ.

In-Article Banner
spot_img

Latest article