Header Banner

ದಕ್ಷಿಣ ಕನ್ನಡದಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ

Banner

ದಕ್ಷಿಣ ಕನ್ನಡದಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ

Advertisement

ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಹಿನ್ನೆಲೆ, ಜುಲೈ 3, 2026 (ಶುಕ್ರವಾರ) ರಂದು ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು 2ನೇ ಪಿಯುಸಿ (12ನೇ ತರಗತಿ)ವರೆಗೆ ಇರುವ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  

ಜಿಲ್ಲಾಡಳಿತದ ಆದೇಶದಂತೆ, ವಸತಿ (Residential) ಶಾಲೆಗಳು ಹಾಗೂ ವಸತಿ ಪಿಯು ಕಾಲೇಜುಗಳಿಗೂ ಈ ರಜೆ ಅನ್ವಯವಾಗಲಿದೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.  

ಇದೇ ವೇಳೆ, ಸಾರ್ವಜನಿಕರು ನದಿ, ಹೊಳೆ, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರಗಳಿಗೆ ಅನಗತ್ಯವಾಗಿ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.  

In-Article Banner
spot_img

Latest article