ದಿನಾಂಕ 25-10-2025 ರಂದು ಕರ್ನಾಟಕ ಸರಕಾರ ಲೋಕೋಪಯೊಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.
ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ವಿ.ಪ. ಮುಖ್ಯ ಸಚೇತಕರು ಶ್ರೀ ಸಲೀಂ ಅಹ್ಮದ್, ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ಶ್ರೀ ಸಲೀಂ ಜಿ. ಮುಜಾವರ, ಕಾರ್ಯದರ್ಶಿಗಳು ಶ್ರೀ ಜೈನುಲ್ ಅಬದೀನ ಮುಜಾವರ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮುಜಾವರ ಸಮುದಾಯದ ಗಣ್ಯ ಮುಖಂಡರು ಉಪಸ್ಥಿತರಿದ್ದರು.















