ಎಸ್. ಡಿ. ಪಿ.ಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಏ. ಕೆ ರಿಯಾಝ್ ಅಡ್ಡೂರು ಆಯ್ಕೆ
ಸುರತ್ಕಲ್ :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿಷೇಶ ಕ್ಷೇತ್ರ ಪ್ರತಿನಿಧಿಗಳ ಸಭೆಯು ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ತೆರವಾದ ಸ್ಥಾನಕ್ಕೆ ಆಂತರಿಕ ಚುನಾವಣೆಯ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಏ. ಕೆ ರಿಯಾಝ್ ಅಡ್ಡೂರು, ಕೋಶಾಧಿಕಾರಿಯಾಗಿ ಆಕಿಬ್ ವಾಮಂಜೂರು ಇವರನ್ನು ಆಯ್ಕೆ ಮಾಡಲಾಯಿತು,ಚುನಾವಣಾ ಪ್ರಕ್ರಿಯೆಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೆಮೀರ್ ಜೋಕಟ್ಟೆ ಹಾಗೂ ಜಿಲ್ಲಾ ಕಾರ್ಯದರ್ಶಿ ನಿಸಾರ್ ಮರವೂರು ನಡೆಸಿಕೊಟ್ಟರು.















