ಕಾಬುಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಯುದ್ಧ ಮುಂದುವರೆದಿದ್ದು, ಉಭಯ ರಾಷ್ಟ್ರಗಳ ಗಡಿಗಳಲ್ಲಿ ಉದ್ವಿಗ್ವ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಪರಸ್ಪರ ಭಾರೀ ಬಾಂಬ್ ದಾಳಿ ನಡೆಸುತ್ತಿವೆ. ಸೋಮವಾರ ರಾತ್ರಿ ಪಾಕಿಸ್ತಾನ ಅಫ್ಘಾನಿಸ್ತಾನದಲ್ಲಿ ದೊಡ್ಡ ಮಟ್ಟದ ವಾಯುದಾಳಿ ನಡೆಸಿದೆ.

ಕಾಬೂಲ್‌ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಅಫ್ಘಾನಿಸ್ತಾನ ಸರ್ಕಾರದ ವಕ್ತಾರ ಹಮ್ದಲ್ಲಾ ಫಿತ್ರಾತ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾತ್ರಿ 9 ಗಂಟೆಗೆ ನಡೆದ ಈ ದಾಳಿಯು 2,000 ಬೆಡ್‌ ಇರುವ ಆಸ್ಪತ್ರೆಯ ಪ್ರಮುಖ ವಿಭಾಗಗಳನ್ನು ನಾಶಮಾಡಿದ್ದು, ರಕ್ಷಣಾ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ಆಸ್ಪತ್ರೆಗಳನ್ನು ಮತ್ತು ನಾಗರಿಕ ಸ್ಥಳಗಳನ್ನು ಗುರಿ ಮಾಡುತ್ತಿದೆ. ಇದು ಮಾನವತೆಯ ವಿರುದ್ಧದ ಅಪರಾಧ ಎಂದು ಖಂಡಿಸಿದ್ದಾರೆ

ಆರೋಪ ನಿರಾಕರಿಸಿದ ಪಾಕ್

ಈ ನಡುವೆ ಆಫ್ಘಾನಿಸ್ತಾನ ಮಾಡಿರುವ ಆರೋಪವನ್ನು ಪಾಕಿಸ್ತಾನ ನಿರಾಕರಿಸಿದೆ. ಪಾಕಿಸ್ತಾನದ ಪ್ರಧಾನಮಂತ್ರಿ ಶೆಹ್‌ಬಾಜ್ ಶರೀಫ್ ಅವರ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಕಾಬೂಲ್‌ನಲ್ಲಿ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರರ್ ಅವರು ಪ್ರತಿಕ್ರಿಯಿಸಿ, ಪಾಕಿಸ್ತಾನದ ಕಾಬುಲ್ ಮತ್ತು ಪೂರ್ವ ಅಫ್ಘಾನಿಸ್ತಾನದ ನಂಗಾರ್ಹರ್ ಪ್ರಾಂತ್ಯದಲ್ಲಿ ಸೈನಿಕ ತಾಣಗಳನ್ನು ಗುರಿಯಾಗಿಸಿತು. ಸೈನಿಕ ಘಟಕಗಳು ಮತ್ತು ಶಸ್ತ್ರಾಸ್ತ್ರ ಸಂಗ್ರಹಣಾ ತಾಣಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಹಿತಿ ಇಲಾಖೆ ಪ್ರತಿಕ್ರಿಯಿಸಿ, ಅಫ್ಘಾನ್ ಸರ್ಕಾರದ ಆರೋಪಗಳು ಸುಳ್ಳು, ದಾರಿತಪ್ಪಿಸುವ, ಭಾವನೆಗಳನ್ನು ಕೆರಳಿಸುವ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗೆ ಕಾನೂನುಬಾಹಿರ ಬೆಂಬಲ ನೀಡುವುದನ್ನು ಮರೆಮಾಡುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು.

ಉಗ್ರರ ವಿರುದ್ಧ ಹೋರಾಡಿ; ಅಫ್ಘಾನಿಸ್ತಾನಕ್ಕೆ ವಿಶ್ವಸಂಸ್ಥೆ ಕರೆ

ಏತನ್ಮಧ್ಯೆ ಭಯೋತ್ಪಾದನೆಯನ್ನು ಎದುರಿಸಲು ತಕ್ಷಣವೇ ಪ್ರಯತ್ನಗಳನ್ನು ಹೆಚ್ಚಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತಕ್ಕೆ ಕರೆ ನೀಡಿದೆ.

UNSC ನಿರ್ಣಯವು ಪಾಕಿಸ್ತಾನದಲ್ಲಿ ನಡೆದ ದಾಳಿಗಳನ್ನು ನೇರವಾಗಿ ಉಲ್ಲೇಖಿಸದೆ, “ಎಲ್ಲಾ ಭಯೋತ್ಪಾದನಾ ಚಟುವಟಿಕೆಗಳನ್ನೂ ಅತ್ಯಂತ ಕಠಿಣವಾಗಿ ಖಂಡಿಸುವುದಾಗಿ ತಿಳಿಸಿದೆ,

ಪಾಕಿಸ್ತಾನ ಸರ್ಕಾರ ಅಫ್ಘಾನಿಸ್ತಾನವು ಪಾಕಿಸ್ತಾನಿ ತಾಲಿಬಾನ್, ಅಮೆರಿಕಾದಿಂದ ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಲಾದ ಗುಂಪುಗಳಿಗೆ ಹಾಗೂ ಬಲೂಚ್ ವಿಶಿಷ್ಟ ಗುಂಪುಗಳಿಗೆ ಆಶ್ರಯ ನೀಡುತ್ತಿದೆ ಎಂದು ಆರೋಪಿಸಿದೆ. ಆದರೆ, ಅಫ್ಘಾನ್ ಸರ್ಕಾರ ಈ ಆರೋಪವನ್ನು ತಿರಸ್ಕರಿಸಿದೆ

error: Content is protected !!
Don`t copy text! This Content is Protected