ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ಸಾಧಕರಿಗೆ ನೀಡುವ ಶಿಕ್ಷಣ ರತ್ನ ಪ್ರಶಸ್ತಿಗೆ ಈ ಬಾರಿ ಉದ್ಯಮಿ, ಸಮಾಜ ಸೇವಕ ಡಾ ಯು ಟಿ ಇಫ್ತಿಖಾರ್ ಅಲಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಭೀಮರಾವ್ ವಾಸ್ಟರ್ ಕೋಡಿಹಾಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಲಾಗುವುದೆಂದು ತಿಳಿಸಿದ್ದಾರೆ.
ಡಾ ಯು ಟಿ ಇಫ್ತಿಖಾರ್ ಅಲಿಯವರು ಹಲವು ಉದ್ಯಮವನ್ನು ನಡೆಸುತ್ತಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿದ್ದಾರೆ.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಇವರ ಸೇವೆ ಅವಿಸ್ಮರಣೀಯ.
ಅವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Best wishes from:
Nazeer Kannur and Ali Monu Ullal