Image

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಶೇ.50ರಷ್ಟು ಸಚಿವರನ್ನು ಸಿದ್ದು ಕೈಬಿಡುವ ಸಾಧ್ಯತೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಕ್ಯಾಬಿನೆಟ್ ಸಚಿವರಿಗೆ ಅಕ್ಟೋಬರ್ 13 ರಂದು ಔತಣಕೂಟ ಆಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. AICC ಹೈಕಮಾಂಡ್‌ ಜೊತೆಗಿನ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ನವೆಂಬರ್‌ನಲ್ಲಿ ಸಂಪುಟ ಪುನಾರಚನೆಯನ್ನು ಕೈಗೊಳ್ಳುವ ಯೋಜನೆಯನ್ನು ಸೂಚಿಸಿದ್ದಾರೆಂದು ವರದಿಯಾಗಿದೆ.

ಮೂಲಗಳ ಪ್ರಕಾರ ಹಾಲಿ ಶೇ.50ರಷ್ಟು ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ. ನವೆಂಬರ್‌ನಲ್ಲಿ ಸುಮಾರು 15 ಹೊಸ ಸಚಿವರನ್ನು ಸೇರ್ಪಡೆಗೊಳಿಸುವುದರಿಂದ ಮುಖ್ಯಮಂತ್ರಿಯನ್ನು ತಕ್ಷಣವೇ ಬದಲಾಯಿಸಲು ಹೈಕಮಾಂಡ್‌ಗೆ ಕಷ್ಟವಾಗಬಹುದು.

ಏಕೆಂದರೆ ಅಷ್ಟರಲ್ಲಿ ಹೊಸ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿರುತ್ತದೆ. ಬಿಹಾರ ಚುನಾವಣೆಯ ನಂತರದ ಸಂಪುಟ ಪುನರ್ ರಚನೆ ಕಾರ್ಯತಂತ್ರ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಬಹುದು ಎಂದು ಪಕ್ಷದೊಳಗಿನವರು ಹೇಳುತ್ತಾರೆ.

ಡಿಕೆ ಶಿವಕುಮಾರ್ ಹೇಳಿದ್ದು ಏನು?

ಸಚಿವ ಸಂಪುಟ ಪುನಾರಚನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಅಂತಹ ಯಾವುದೇ ಮಾಹಿತಿ ಗೊತ್ತಿಲ್ಲ. ಇದು ಮುಖ್ಯಮಂತ್ರಿಗೆ ಬಿಟ್ಟದ್ದು. ನಾವೆಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ. ನಾನು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಇದು ಮುಖ್ಯಮಂತ್ರಿ ಮತ್ತು ಪಕ್ಷಕ್ಕೆ ಬಿಟ್ಟದ್ದು. ನಾನು ಸಲಹೆಗಳನ್ನು ನೀಡಬಲ್ಲೆ. ಯಾರೂ ಗೊಂದಲ ಸೃಷ್ಟಿಸಬೇಡಿ ಎಂದು ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹ ಕಾಂಗ್ರೆಸ್ ಪಕ್ಷದೊಳಗೆ ಹರಿದಾಡುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರ ಹಲವು ನಾಯಕರು ಎರಡೂವರೆ ವರ್ಷಗಳ ನಂತರ ನಾಯಕತ್ವದ ಸಂಭಾವ್ಯ ಬದಲಾವಣೆಯ ಸುಳಿವು ನೀಡಿದ್ದು, ಸಿದ್ದರಾಮಯ್ಯ ಅವರ ಅಧಿಕಾರಾವಧಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ನಾಯಕತ್ವ ಬದಲಾವಣೆ ಇಲ್ಲ:

ಈ ಊಹಾಪೋಹಗಳ ಹೊರತಾಗಿಯೂ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ. ನಾಯಕತ್ವದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ದಲಿತ ಸಚಿವರ ಸಭೆ: ಈ ಬೆಳವಣಿಗೆಗಳ ನಡುವೆ ಮೂವರು ದಲಿತ ಸಚಿವರಾದ ಡಾ. ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಮಹಾದೇವಪ್ಪ ಅವರು ಉಪಹಾರದ ನೆಪದಲ್ಲಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಯಾದರೆ ದಲಿತ ಮುಖಂಡರು ಏನು ಮಾಡಬೇಕು ಎಂದು ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ದಲಿತ ಸಚಿವರು ತಮ್ಮ ಗುಂಪಿನಲ್ಲಿ ಮುಖ್ಯಮಂತ್ರಿಯಾಗಿ ಪರಮೇಶ್ವರ್ ಅವರನ್ನು ಸೂಚಿಸಲು ಯೋಚಿಸುತ್ತಿದ್ದಾರೆಂದು ವರದಿಗಳು ಹೇಳಿವೆ

Releated Posts

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…

ByByshanmedianewsDec 23, 2025

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…

ByByshanmedianewsDec 22, 2025

ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ

ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…

ByByshanmedianewsDec 22, 2025

ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…

ByByshanmedianewsDec 12, 2025

ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, 77 ಕಾಲೇಜುಗಳ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶಾಲಾ- ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ಜಾಲದ ವಿರುದ್ಧ ಜಾಗೃತಿ ಹಾಗೂ ಡ್ರಗ್ಸ್‌ ತಪಾಸಣೆ ಅಭಿಯಾನದ ಪ್ರಥಮ…

ByByshanmedianewsDec 11, 2025

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ. ಬೆಳಗಾವಿ:…

ByByshanmedianewsDec 10, 2025

ಇಂದು ಉಳ್ಳಾಲ ಮೇಲಂಗಡಿ ದರ್ಗಾ ವಠಾರದಲ್ಲಿ ತುರ್ತು ಕಾಮಗಾರಿಯಿಂದ ವಿದ್ಯುತ್ ವ್ಯತ್ಯಯ

ಉಳ್ಳಾಲ ಮೇಲಂಗಡಿ ದರ್ಗಾ ವಠಾರದಲ್ಲಿ ಕರೆಂಟ್ ಇಲ್ಲ ಇವತ್ತು

ByByshanmedianewsDec 10, 2025

ಎಂ ಡಿ ಡಾ ಯೂಸುಫ್ ಕುಂಬ್ಳೆ ಸನ್ಮಾನ ಮಂಗಳೂರು

ಮಂಗಳೂರು ತಾಜ್ ವಿವಾoತ ಹಾಲ್ ನಲ್ಲಿ ಮಂಗಳೂರಿನ ಖ್ಯಾತ ಇಂಟರ್ವೆನ್ಶನ್ ಕಾರ್ಡಿಯೋಲಾಜಿಸ್ಟ್, ಇಂಡಿಯಾನ ಹಾಸ್ಪಿಟಲ್ & ಹಾರ್ಟ್ ಇನ್ಸ್ಟಿಟ್ಯೂಟ್ ಎಂ ಡಿ ಡಾ ಯೂಸುಫ್…

ByByshanmedianewsNov 29, 2025

Scroll to Top