ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಬಳಕೆಯನ್ನು ಸಂಪೂರ್ಣ ನಿಯಂತ್ರಿಸುವ ನಿಟ್ಟಿನಲ್ಲಿ ವಾರದೊಳಗೆ ಎಲ್ಲ ಶಾಲಾ ಕಾಲೇಜು ಗಳಲ್ಲಿ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ರಚಿಸಬೇಕು. ಈ ಸಮಿತಿಯ ಮೂಲಕ ಮಾದಕ ವಸ್ತು ಸೇವನೆಯನ್ನು ಪತ್ತೆ ಹಚ್ಚಲು ಎಸೆಸೆಲ್ಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದ ಮಾದರಿ ಪರೀಕ್ಷೆಯನ್ನು ಮಾಡಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಪದವಿ ಪೂರ್ವ ಹಾಗೂ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಉಡುಪಿಯ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಗುರುವಾರ ಆಯೋಜಿಸ ಲಾದ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ರಕ್ತ ಪರೀಕ್ಷೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಸಹಕಾರವನ್ನು ವಿದ್ಯಾ ಸಂಸ್ಥೆಗಳಿಗೆ ನೀಡಲಿದೆ. ಮಾದಕ ವಸ್ತು ಸೇವನೆ ಮಾಡಿದ್ದರೆ ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಲು ಸಾಧ್ಯ. ಅದು ಸುಮಾರು ದಿನಗಳ ಕಾಲ ರಕ್ತದಲ್ಲಿ ಇರುತ್ತದೆ. ಅದೇ ರೀತಿ ಉಗುರು ಮತ್ತು ಕೂದಲಿನ ಮಾದರಿ ಯಿಂದಲೂ ಒಂದು ವರ್ಷದ ಹಿಂದೆ ಮಾದಕ ವಸ್ತು ಸೇವಿಸಿದ್ದರೂ ಪತ್ತೆ ಹಚ್ಚಬಹುದು ಎಂದರು.
ರಕ್ತ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟರೆ ಆ ವಿದ್ಯಾರ್ಥಿಗಳಿಗೆ ಪೋಷಕರನ್ನು ಕರೆಸಿ ಕೌನ್ಸಿಲಿಂಗ್ ಮಾಡಬೇಕು. ಮಕ್ಕಳು ಕೆಲವೊಮ್ಮೆ ಕುತೂಹಲಕ್ಕಾಗಿ ಸೇವಿಸಿರುತ್ತಾರೆ. ಅದಕ್ಕಾಗಿ ಅವರ ಇಡೀ ಜೀವನ ಹಾಳು ಮಾಡುವುದು ಸರಿಯಲ್ಲ. ಹಾಗಾಗಿ ಮನೋತಜ್ಞರ ಮೂಲಕ ಅವರಿಗೆ ಸರಿಯಾದ ತಿಳುವಳಿಕೆ ಮೂಡಿಸುವುದು ಅಗತ್ಯ ಎಂದು ಅವರು ತಿಳಿಸಿದರು.
ನೋಡೆಲ್ ಅಧಿಕಾರಿ ನೇಮಕ: ವಿದ್ಯಾ ಸಂಸ್ಥೆಗಳಲ್ಲಿನ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ಯಲ್ಲಿ ಪ್ರಾಂಶುಪಾಲರು, ಸಿಬ್ಬಂದಿ, ಮಕ್ಕಳು ಇರಬೇಕು. ವಿದ್ಯಾಸಂಸ್ಥೆ ವ್ಯಾಪ್ತಿಗೆ ಒಳಪಡುವ ಪೊಲೀಸ್ ಠಾಣೆಗಳಲ್ಲಿನ ಮುಖ್ಯಸ್ಥರಾದ ಪೊಲೀಸ್ ನಿರೀಕ್ಷಕರು/ಪೊಲೀಸರು ಉಪನಿರೀಕ್ಷಕರು ಈ ಸಮಿತಿಗೆ ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಲಾಗುತ್ತದೆ ಎಂದು ಎಸ್ಪಿ ತಿಳಿಸಿದರು.
ಕಾಲೇಜು ಆಡಳಿತ ಮಂಡಳಿ ನಿರಂತರವಾಗಿ ಪೊಲೀಸರ ಸಂಪರ್ಕದಲ್ಲಿದ್ದರೆ ಅಲ್ಲಿನ ಮಕ್ಕಳು ಇಂತಹ ದುಶ್ಚಟಗಳಿಗೆ ಬಲಿ ಬೀಳುವುದು ಕಡಿಮೆ ಆಗುತ್ತದೆ. ಪೊಲೀಸ್ ಠಾಣೆಯ ಅಧಿಕಾರಿ ಅಥವಾ ಸಿಬ್ಬಂದಿ ಸಮ್ಮುಖದಲ್ಲಿ ಪ್ರತಿ ತಿಂಗಳು ಈ ಕಮಿಟಿಯ ಸಭೆಯನ್ನು ಮಾಡಬೇಕು. ಮೂರು ತಿಂಗಳಿಗೊಮ್ಮೆ ನೋಡೆಲ್ ಅಧಿಕಾರಿಯನ್ನು ಸಭೆಗೆ ಕರೆಸಬೇಕು. ನೋಡೆಲ್ ಅಧಿಕಾರಿಗೆ ನೀಡಿದ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸಲ್ಲ. ಎಲ್ಲ ಮಾಹಿತಿ ಯನ್ನು ಗೌಪ್ಯವಾಗಿ ಇಡಲಾಗುವುದು. ತಿಂಗಳಿಗೆ ಒಮ್ಮೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮಗಳನ್ನು ತಮ್ಮ ಸಂಸ್ಥೆಗಳಲ್ಲಿ ಮಾಡಬೇಕು ಎಂದರು.
ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷಾ ಪ್ರಿಯಂ ವಧಾ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಪಿ. ಉಪಸ್ಥಿತರಿದ್ದರು.
ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು. ಡಿಎಆರ್ ಸಿಬ್ಬಂದಿ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.
‘ಮಾದಕ ವಸ್ತುಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಡೀ ರಾಜ್ಯದಲ್ಲಿ ಪ್ರಥಮ ಬೆಂಗಳೂರು, ನಂತರ ಮಂಗಳೂರು ಹಾಗೂ ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ಆತಂಕಕಾರಿ ವಿಚಾರವಾಗಿದೆ. ಕಾಲೇಜುಗಳಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ಮಾದಕ ವಸ್ತುಗಳನ್ನು ಪೂರೈಕೆ ಮಾಡುವ ಪೆಡ್ಲರ್ ಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ನಮಗೆ ಬೇಕಾಗಿರು ವುದು ಸೇವನೆ ಮಾಡುವ ವಿದ್ಯಾರ್ಥಿ ಗಳಲ್ಲ, ಅವರಿಗೆ ಪೂರೈಕೆ ಮಾಡುವ ಪೆಡ್ಲರ್‌ಗಳು’
-ಹರಿರಾಮ್ ಶಂಕರ್, ಎಸ್ಪಿ ಉಡುಪಿ
ಇದನ್ನು ಉಳ್ಳಾಲದ ಸಾಮಾಜಿಕ ಕಾರ್ಯಕರ್ತ @Jabbar Ullal ಎರಡು ವರ್ಷಗಳ ಹಿಂದೆ ಹೇಳಿದ್ದಾನೆ..