ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ತೀವ್ರವಾಗಿ ಅಸ್ವಸ್ಥತಗೊಂಡು ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಘಾತಕಾರಿ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇರ್ಫಾನ್ ಕಾನ ಕಳವಳ ವ್ಯಕ್ತಪಡಿಸಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇತ್ತೀಚೆಗೆ ಎಮ್ ಆರ್ ಪಿ ಎಲ್ ಅನಿಲ ಉತ್ಪಾದನಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಒರ್ವ ಗಂಭೀರ ಗಾಯಗೊಂಡ ಘಟನೆ ಮಾಸುವ ಮುನ್ನವೇ ಈಗ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ತೀವ್ರವಾಗಿ ಅಸ್ವಸ್ಥತಗೊಂಡು ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಘಾತಕಾರಿ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿರುತ್ತದೆ. ಈ ರೀತಿಯ ಘಟನೆಗಳು ಪದೇ ಪದೇ ಕೈಗಾರಿಕಾ ಕಂಪೆನಿಗಳಲ್ಲಿ ನಡೆಯಲು ಕಂಪನಿಗಳ ನಿರ್ವಹಣೆಯ ನಿರ್ಲಕ್ಷ್ಯವೇ ಕಾರಣವಾಗಿರಬಹುದು ಎಂಬ ದಟ್ಟವಾದ ಸಂಶಯ ಕಾಡುತ್ತಿದೆ ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕಾ ಸಂಸ್ಥೆಗಳಿಗೆ ಎಚ್ಚರಿಕೆ ನೀಡಬೇಕು ಮತ್ತು ಕೈಗಾರಿಕಾ ಕಂಪನಿಗಳು ಕಾರ್ಮಿಕರಿಗಾಗಿರುವ ಸುರಕ್ಷಾ ಕ್ರಮ ಯಾವ ರೀತಿ ನಿಬಾಯಿಸುತ್ತದೆ ಎಂಬುವುದನ್ನು ಪರಿಶೀಲನೆ ನಡೆಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇರ್ಫಾನ್ ಕಾನ ಆಗ್ರಹಿಸಿದ್ದಾರೆ.