ಉಳ್ಳಾಲ ಬ್ಲಾಕ್ ನಗರ ಮಹಿಳಾ ಕಾಂಗ್ರೆಸ್ ಸಭೆಯು ಬ್ಲಾಕ್ ಅಧ್ಯಕ್ಷರಾದ ಶ್ರೀಯುತ ರಮೇಶ್ ಶೆಟ್ಟಿ ಬೋಳಿಯಾರ್ ರವರ ಅಧ್ಯಕ್ಷತೆಯಲ್ಲಿ ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಮಿತಾ ಅಶ್ವಿನ್ ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ರೈ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾದ ಶ್ರೀಮತಿ ಸುರೇಖಾ ಚಂದ್ರಹಾಸ್ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಯುತ ಸದಾಶಿವ ಉಳ್ಳಾಲ್ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಶ್ರೀಯುತ ದಿನೇಶ್ ರೈ ಹಾಗು ಮುಸ್ತಫಾ ಹರೇಕಲ ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫ ಇಂಟೆಕ್ ಅಧ್ಯಕ್ಷರಾದ ಶ್ರೀಮತಿ ಪ್ರಭಾವತಿ ಶೆಟ್ಟಿ ವಖ್ಫ್ ಮಂಡಳಿಯ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ರಜಿಯಾ ಇಬ್ರಾಹಿಂ ಕಿಸಾನ್ ಘಟಕದ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ ಆಪ್ತ ಕಾರ್ಯದರ್ಶಿ ಮನ್ಸೂರ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.


