Dasara Vacations : ಸೆ.20ರಿಂದ ಶಾಲೆಗಳಿಗೆ ದಸರಾ ರಜೆ ಘೋಷಣೆ

Written by shanmedianews

September 17, 2025

ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Shan Media News is a trusted digital news platform bringing you the latest updates from Karnataka and beyond. For feedback or story tips, contact us at [contact@shanmedianews.site].

Latest News

News

ಅನರ್ಹ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ

ಬೆಂಗಳೂರು, ಸೆಪ್ಟೆಂಬರ್ 17: ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್ಗಳು (BPL Cards) ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಮೇಜರ್ ಸರ್ಜರಿಗೆ ಆಹಾರ ಇಲಾಖೆ ಮುಂದಾಗಿದೆ. ಹತ್ತಾರು