West Asia Conflict: ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ಎಲಾನ್ ಮಸ್ಕ್ ಎಂಟ್ರಿ, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆ

ನವದೆಹಲಿ/ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವಿನ ಮಹತ್ವದ ದೂರವಾಣಿ ಮಾತುಕತೆಯಲ್ಲಿ ಉದ್ಯಮಿ ಎಲಾನ್ ಮಸ್ಕ್ ಅವರು ಭಾಗವಹಿಸಿದ್ದರು ಎಂಬ ಸುದ್ದಿ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಧ್ಯ ಪ್ರಾಚ್ಯ ಸಂಘರ್ಷ ಉಲ್ಬಣಗೊಂಡಿರುವ ಹಿನ್ನೆಲೆ ಟ್ರಂಪ್ ಹಾಗೂ ಮೋದಿ ನಡುವೆ ಮಹತ್ವದ ಮಾತುಕತೆ ನಡೆದಿದೆ ಎಂದು The New York Times ವರದಿ ಮಾಡಿದೆ. ಮಧ್ಯ ಪ್ರಾಚ್ಯದಲ್ಲಿ ಫೆಬ್ರವರಿ 28ರಿಂದ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಟ್ರಂಪ್ ಅವರು, ಮೋದಿ […]

ಇರಾನ್ ಡ್ರೋನ್ ದಾಳಿ: UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ: ಐವರು ಭಾರತೀಯರಿಗೆ ಗಾಯ

ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಐವರು ಭಾರತೀಯರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಬುಧಾಬಿಯ ಕೈಗಾರಿಕಾ ವಲಯದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಐದು ಮಂದಿ ಭಾರತೀಯರಿಗೆ ಗಾಯಗಳಾಗಿವೆ ಎಂದು ಸರ್ಕಾರದ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ. ಯುಎಇ ರಕ್ಷಣಾ ಸಚಿವಾಲಯದ ಮಾಹಿತಿ ನೀಡಿ, ಇರಾನ್‌ನಿಂದ ಹಾರಿಬಂದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆ ತಡೆಯುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಯ […]

ರೋಮಾಂಚಕಾರಿ ಘೋಷಣೆಗೆ ಕಾಯ್ತಿರಿ ಅಂದಿದ್ದ ಅಮೆರಿಕಾಗೆ ಶಾಕ್: ಗುಪ್ತಚರ ಸಂಸ್ಥೆಯನ್ನೇ ಟಾರ್ಗೆಟ್ ಮಾಡಿದ ಇರಾನ್!: ಅಲ್ಲಿ ಆಗಿದ್ದೇನು?

ವಾಷಿಂಗ್ ಟನ್: ಇರಾನ್-ಸಂಬಂಧಿತ ಹ್ಯಾಕರ್‌ಗಳು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರ ವೈಯಕ್ತಿಕ ಇನ್‌ಬಾಕ್ಸ್‌ ನ್ನು ಹ್ಯಾಕ್ ಮಾಡಿ ನುಸುಳಿದ್ದಾರೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ. ನಿರ್ದೇಶಕರ ಛಾಯಾಚಿತ್ರಗಳು ಮತ್ತು ಅವರ resume ನ್ನು ಇಂಟರ್ನೆಟ್‌ ನಲ್ಲಿ ಪ್ರಕಟಿಸಿದ್ದಾರೆ. ಹ್ಯಾಕರ್ ಗುಂಪು ಹಂಡಲಾ ಹ್ಯಾಕ್ ಟೀಮ್ ತಮ್ಮ ವೆಬ್‌ಸೈಟ್‌ನಲ್ಲಿ, ಪಟೇಲ್ “ಈಗ ಯಶಸ್ವಿಯಾಗಿ ಹ್ಯಾಕ್ ಮಾಡಿದ ಬಲಿಪಶುಗಳ ಪಟ್ಟಿಯಲ್ಲಿ ಅವರ ಹೆಸರನ್ನು ಕಾಣಬಹುದು” ಎಂದು ಹೇಳಿದೆ. ಹಂಡಲಾ ಪ್ರಕಟಿಸಿದ ಇಮೇಲ್‌ಗಳನ್ನು ರಾಯಿಟರ್ಸ್ ತಕ್ಷಣವೇ ದೃಢೀಕರಿಸಲು ಸಾಧ್ಯವಾಗಲಿಲ್ಲ, ಆದರೆ ಹ್ಯಾಕರ್‌ಗಳು […]

ಇರಾನ್‌ನಿಂದ 550ಕ್ಕೂ ಹೆಚ್ಚು ಭಾರತೀಯರ ಸ್ಥಳಾಂತರ; ಗಲ್ಫ್‌ನಿಂದ 20,000 ಜನ ಭಾರತಕ್ಕೆ ವಾಪಸ್

ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಸರ್ಕಾರ ಮತ್ತು ಅರ್ಮೇನಿಯಾ ಜನರಿಗೆ ಧನ್ಯವಾದಗಳು. ಈ ಸವಾಲಿನ ಸಮಯದಲ್ಲಿ ನಿಮ್ಮ ಬೆಂಬಲ ಶ್ಲಾಘನೀಯ” ಎಂದು ಜೈಶಂಕರ್ ಅವರು ಪೋಸ್ಟ್‌ ಮಾಡಿದ್ದಾರೆ

ಪೋರಂ ವತಿಯಿಂದ ಈದ್ ರೇಷನ್ ಕಿಟ್ ವಿತರಣೆ

ಮಂಗಳೂರು-: ಉಳ್ಳಾಲ:~ ಹಲವಾರು ಜೀವ ಕಾರುಣ್ಯ ಸೇವೆಗಳಿಂದ ಗುರುತಿಸಿಕೊಂಡ ಪ್ರಸಿದ್ಧ ಯೂತ್‌ ಫಾರಂ ಮಂಗಳೂರು ಸಂಸ್ಥೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮವೂ ದಾನಿಗಳ ಸಹಕಾರದೊಂದಿಗೆ ಸುಮಾರು 160 ಅರ್ಹ ಕುಟುಂಬಕ್ಕೆ ಸಂಸ್ಥೆಯ ಸ್ಥಾಪಕಧ್ಯಕ್ಷರಾದ ಮೌಶಿರ್ ಸಾಮಣಿಗೆ ರವರ ನೇತೃತ್ವದಲ್ಲಿ ನಾಟೆಕಲ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಸ್ಥಳೀಯ ಮಸೀದಿ ಇಮಾಮರಾದ ಹುಸೈನ್ ಮುಸ್ಲಿಯಾರ್ ರವರು ದುವಾಶಿವರ್ಚನ ದ ಮೂಲಕ ಚಾಲನೆ ನೀಡಿದರು. ಈ‌ ಒಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೌಶಿರ್ ಸಮಾಮನಿಗೆ ರವರು […]

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ […]

ಮಂಗಳೂರು ವಿಧಾನಸಭಾ ಕ್ಷೇತ್ರ – ಎನ್‌ಎಸ್‌ಯುಐ ಉಳ್ಳಾಲ ನಗರ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ

ಮಂಗಳೂರು ವಿಧಾನಸಭಾ ಕ್ಷೇತ್ರದ National Students’ Union of India (ಎನ್‌ಎಸ್‌ಯುಐ) ಸಂಘಟನೆಯ ಉಳ್ಳಾಲ ನಗರ ಘಟಕದ ಅಧ್ಯಕ್ಷರಾಗಿ ಶ್ರೀ ನೂಹ್ ಉಳ್ಳಾಲ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ನೇಮಕಾತಿಯೊಂದಿಗೆ ಉಳ್ಳಾಲ ನಗರದಲ್ಲಿ ಎನ್‌ಎಸ್‌ಯುಐ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ವಿವಿಧ ವಿದ್ಯಾರ್ಥಿ ಚಟುವಟಿಕೆಗಳನ್ನು ಚುರುಕುಗೊಳಿಸುವ ಜವಾಬ್ದಾರಿ ನೂಹ್ ಉಳ್ಳಾಲ ಅವರು ವಹಿಸಿಕೊಳ್ಳಲಿದ್ದಾರೆ. ವಿದ್ಯಾರ್ಥಿ ಸಮುದಾಯದೊಂದಿಗೆ ಹತ್ತಿರವಾಗಿ ಕಾರ್ಯನಿರ್ವಹಿಸುತ್ತಾ, ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ ಹಾಗೂ ಅವರ ಸಮಸ್ಯೆಗಳಿಗೆ ಸೂಕ್ತ […]

2028 ಬಂಟ್ವಾಳ ಅಭ್ಯರ್ಥಿಯಾಗಿ ಎಂ.ಎಸ್. ಮಹಮ್ಮದ್ ಹೆಸರು ಸೂಚಿಸಲಿ: ಮಾಜಿ ಸಚಿವರಿಗೆ ಸಮುದಾಯದ ಮನವಿ

ಬಂಟ್ವಾಳ: ಮುಂಬರುವ 2028ರ ಬಂಟ್ವಾಳ ವಿಧಾನಸಭಾ ಚುನಾವಣೆಯಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಿಸುವಂತೆ ಹಾಗೂ ಅವರ ಹೆಸರನ್ನು ಮಾಜಿ ಸಚಿವರು ಸ್ವತಃ ಸೂಚಿಸಬೇಕು ಎಂಬ ಮನವಿ ಅಲ್ಪಸಂಖ್ಯಾತ ಸಮುದಾಯದ ವಲಯದಲ್ಲಿ ಕೇಳಿಬರುತ್ತಿದೆ. ಈ ಹಿಂದಿನ ವಿಟ್ಲ ವಿಧಾನಸಭಾ ಕ್ಷೇತ್ರ ಅಸ್ತಿತ್ವದಲ್ಲಿದ್ದ ಸಮಯದಲ್ಲಿಯೇ ಎಂ.ಎಸ್. ಮಹಮ್ಮದ್ ಅವರು ಕಾಂಗ್ರೆಸ್ ಪಕ್ಷದ ಬಲಿಷ್ಠ ಅಭ್ಯರ್ಥಿಯಾಗಿ ಪರಿಗಣಿಸಲ್ಪಟ್ಟಿದ್ದರು. ಆದರೆ ನಂತರ ನಡೆದ ಕ್ಷೇತ್ರ ಪುನರ್‌ವಿಂಗಡನೆಯಿಂದ ವಿಟ್ಲ ಕ್ಷೇತ್ರ ಬಂಟ್ವಾಳಕ್ಕೆ ವಿಲೀನಗೊಂಡ ಹಿನ್ನೆಲೆಯಲ್ಲಿ ಆ […]

ಸಾಮಾಜಿಕ ಜಾಲತಾಣಗಳಲ್ಲಿ ಭಯ ಬಿತ್ತಿಸುವ ಸಂದೇಶ,ಕಠಿಣ ಕ್ರಮಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ

ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಉಳ್ಳಾದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮುಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೋಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

error: Content is protected !!
Don`t copy text! This Content is Protected